ಬೆಂಗಳೂರು : ಜ್ಯುವೆಲರಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಬೆಂಗಳೂರು: ಕಳೆದ ವಾರ ನಗರದ ಹಲವು ಉದ್ಯಮಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದೂ ಸಹ ತಮ್ಮ ಪರಿಶೀಲನೆ ಮುಂದುವರೆಸಿದ್ದಾರೆ.ನಗರದ ಸುಮಾರು ಹತ್ತಕ್ಕೂ ಅಧಿಕ ಕಡೆಗಳಲ್ಲಿ‌ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.ಬೆಂಗಳೂರಲ್ಲಿ ಉದ್ಯಮಿಗಳ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಆದಾಯ ತೆರಿಗೆ ವಂಚನೆ ಆರೋಪ ಕಂಡು ಬಂದ ಹಿನ್ನೆಲೆಯಲ್ಲಿ ಚಿನ್ನ ಗಿರವಿ ಮತ್ತು ಖರೀದಿ ಮಾಡುವ ಕಂಪನಿಗಳ ಮೇಲೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಉದ್ಯಮಿಗಳು, ಜ್ಯುವೆಲರಿ ಶಾಪ್ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸರ್ಜಾಪುರ ಬಳಿಯ ಮುಳ್ಳೂರು, ಆರ್.ಎಂ.ವಿ ಎಕ್ಸ್ಟೆನ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಪರಿಶೀಲನೆ ಮುಂದುವರೆದಿದೆ.