ಇಂದಿನಿಂದ ರಾಜ್ಯ ರಾಜಧಾನಿಯಲ್ಲಿ ಕಂಬಳ ಕಲರವ: ರಾಜ-ಮಹಾರಾಜ ಜೋಡುಕರೆಯಲ್ಲಿ ವಿಜೃಂಭಿಸಲಿದೆ ತುಳುನಾಡ ಜನಪದ ಕ್ರೀಡೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕರಾವಳಿ ಭಾಗದ ಗ್ರಾಮೀಣ ಕ್ರೀಡೆ ಕಂಬಳ ಕಲರವ ಇಂದಿನಿಂದ ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ.

ಯಕ್ಷಗಾನದ ಭಾಗವತಿಕೆಯೊಂದಿಗೆ ವೇದಿಕೆ ಮತ್ತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಅಶೋಕ್ ಕುಮಾರ್ ರೈ, ಗುರ್ಮೆ ಸುರೇಶ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್ ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಧ್ಯಾಹ್ನ 12ಗಂಟೆಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆ ಉದ್ಘಾಟನೆ ಮಾಡಲಿದ್ದಾರೆ.

ಸಾರ್ವಜನಿಕರೆಲ್ಲರಿಗೂ ಉಚಿತ ಪ್ರವೇಶವಿದ್ದು, ಗಣ್ಯರ ಪಾಲುಗೊಳ್ಳುವಿಕೆ ವಿಶೇಷ ಆಕರ್ಷಣೆ ನೀಡಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರವನ್ನು ಏರ್ಪಡಿಸಲಾಗುವುದು. ಕಂಬಳದ್ ಅಕರೆಯಲ್ಲಿ ಓಡಲು ಅದಾಗಲೇ 180ಕ್ಕೂ ಅಧಿಕ ಕೋಣಗಳು ಸಜ್ಜಾಗಿವೆ. ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಫನ್ ವರ್ಲ್ಡ್‌ ಕಡೆಯಿಂದ ಪ್ರತ್ಯೇಕ ಪ್ರವೇಶ ನೀಡಲಾಗಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4 ರಲ್ಲಿ ಸಾರ್ವಜನಿಕರಿಗೆ ಪ್ರವೇಶ ಮುಕ್ತವಾಗಿದೆ. ಸಾರ್ವಜನಿಕರು ಯಾವುದೇ ಪಾಸ್‌ ತೋರಿಸುವ ಅಗತ್ಯ ಇಲ್ಲ. ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಬಳವನ್ನು ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದಾಗಿದೆ.

ಓಟದ ಕೋಣಗಳಿಗೆ ಬಹುಮಾನ

ಗೆದ್ದ ಕೋಣಗಳಿಗೆ ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು
ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು
ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು
ಕಂಬಳ ಓಡಿಸುವವರಿಗೆ ಕೂಡ ವಿಶೇಷ ಬಹುಮಾನ

ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ

ಕರಂಗೋಲು ನೃತ್ಯ
ಯಕ್ಷಗಾನ
ಕಾಲಿವುಡ್ ಸಮಕಾಲೀನ ನೃತ್ಯ
ಹುಲಿ ವೇಷ ಕುಣಿತ
ಮಾಂಕಳಿ ನಲಿಕೆ

ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ ಸುವ್ಯವಸ್ಥಿತವಾಗಿರಲು ಟ್ರಾಫಿಕ್ ವಾರ್ಡನ್ ಗಳನ್ನು ನಿಯುಕ್ತಿಗೊಳಿಸಲಾಗಿದೆ.