ಮಟ ಮಟ ಮಧ್ಯಾಹ್ನವೆ ಬೆಂಗಳೂರಿಗರಿಗೆ ತಂಪೆರೆದ ವರುಣದೇವ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮಟ ಮಟ ಮಧ್ಯಾಹ್ನವೇ ಮಳೆ ಶುರುವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆ ಕಂಡು ಹರ್ಷ ವ್ಯಕ್ತಪಡಿಸಿದ್ದಾರೆ. ಸತತ ಎರಡನೇ ದಿನ ಸಿಲಿಕಾನ್‌ ಸಿಟಿಯಲ್ಲಿ ಮಳೆ ಸುರಿಯುತ್ತಿದ್ದು, ಬೆಂಗಳೂರು ತನ್ನ ಗತ ವೈಭವಕ್ಕೆ ಮರಳಿದೆ. ರಾಜಧಾನಿಯ ಹಲವೆಡೆ ಬಿಸಿಲ ನಡುವೆ ಮಳೆ ಸುರಿದಿದ್ದು, ಬಿಸಿಲಿನ ಝಳಕ್ಕೆ ಕಾದಿದ್ದ ನಗರಕ್ಕೆ ಮಳೆಯ ಹನಿಗಳು ತಂಪೆರೆದಿವೆ.

ಬೆಂಗಳೂರಿನ ಕಂಟೋನ್ಮೆಂಟ್‌, ರಾಜಾಜಿನಗರ, ಮಲ್ಲೇಶ್ವರ, ಗಾಯತ್ರಿ ನಗರ, ವಸಂತನಗರ, ಬಾಣಸವಾಡಿ, ಎಚ್‌ಬಿಆರ್‌ ಲೇಔಟ್‌, ಕಮ್ಮನಹಳ್ಳಿ, ಲಿಂಗರಾಜಪುರ, ಬಿಟಿಎಂ ಲೇಔಟ್‌, ಜಯನಗರ, ಬಸವೇಶ್ವರ ನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ, ನಾಯಂಡನಹಳ್ಳಿ, ಸದಾಶಿವನಗರ, ಕಾಮಾಕ್ಷಿಪಾಳ್ಯ, ಶೇಷಾದ್ರಿಪುರ, ಶಿವಾಜಿನಗರ, ಬೆಳ್ಳಂದೂರು, ಸಿವಿ ರಾಮನ್‌‌ ನಗರ, ಮಾರತ್ತಹಳ್ಳಿ, ವೈಟ್‌ಫೀಲ್ಡ್‌, ಕಲ್ಯಾಣ ನಗರ, ಹೆಬ್ಬಾಳ, ಮತ್ತಿಕೆರೆ, ಬೊಮ್ಮಸಂದ್ರ, ಎಲೆಕ್ಟ್ರಾನಿಕ್‌ ಸಿಟಿ, ಕೊತ್ತನೂರು ಮತ್ತು ಆರ್‌ಆರ್‌ ನಗರ ಸೇರಿ ಹಲವೆಡೆ ಮಳೆಯಾಗಿದೆ ಎಂದು ವರದಿಯಾಗಿದೆ.