ಕಾರ್ಕಳ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಅಬ್ಬನಡ್ಕದಲ್ಲಿ ಜರಗಿದ 17ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಮಹಾಶಿವರಾತ್ರಿ ಸಂಭ್ರಮ ಹಾಗೂ ದ್ವಿತೀಯ ವರ್ಷದ ಭಜನೋತ್ಸವ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಭಜನಾ ಒಕ್ಕೂಟದ ಅಧ್ಯಕ್ಷ ಶ್ರೀಕಾಂತ್ ಪ್ರಭು ಪಳ್ಳಿ ಹಾಗೂ ಕಾರ್ಕಳ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಯರ್ಲಪಾಡಿ ಇವರನ್ನು ಸನ್ಮಾನಿಸಲಾಯಿತು.