ಉಡುಪಿ: ಭಾರತೀಯ ಜನತಾ ಪಾರ್ಟಿ “ಸ್ಥಾಪನಾ ದಿನ” ಅಂಗವಾಗಿ ಇಂದು ಎ.6 ರಂದು ಶಾಸಕರಾದ ಕೆ. ರಘುಪತಿ ಭಟ್ ಅವರ ಮನೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಧ್ವಜವನ್ನು ಹಾರಿಸುವ ಮೂಲಕ ಸ್ಥಾಪನಾ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಸ್ಥಳೀಯ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ನಗರ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ರಾಘವೇಂದ್ರ ನಾಯ್ಕ್, ಫಲಾನುಭವಿ ಪ್ರಕೋಷ್ಠದ ಸಂಚಾಲಕರಾದ ಮಂಜುಳಾ ಪ್ರಸಾದ್, ಕರಂಬಳ್ಳಿ ಯುವ ಮೋರ್ಚಾ ಸದಸ್ಯರಾದ ಮುಖೇಶ್, ಮಧುಸೂದನ್ ಉಪಸ್ಥಿತರಿದ್ದರು.












