ಚರಂಡಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು!

ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕ 5 ವರ್ಷದ ಅವಿನಾಶ್. ಆಟವಾಡುವ ವೇಳೆ ಮನೆಯ ಮುಂದಿನ ಚರಂಡಿ ಕಾಲುವೆಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಶುಕ್ರವಾರ ಸಂಜೆ 6 ಗಂಟೆಯಿಂದ ಕಾಣೆಯಾಗಿದ್ದ ಬಾಲಕನಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದರು. ಆದರೆ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಮೃತಪಟ್ಟಿರುವುದು ಗೊತ್ತಾಗಿದೆ. ಬಗದಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.