ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಮಂಗಳಾ ಅಂಗಡಿಗೆ ಇದೀಗ ಹಿನ್ನಡೆಯಾಗಿದೆ. 47ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 2,43,631 ಪಡೆದು ಮಂಗಳಾ ಅಂಗಡಿಕ್ಕಿಂತ 8,595 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಮಂಗಳಾ ಅಂಗಡಿ 2,38,036 ಮತ ಗಳಿಸಿದ್ದಾರೆ.