ಹಳ್ಳಿಹಕ್ಕಿ ಎಚ್. ವಿಶ್ವನಾಥ್ ಗೆ ಬಿಗ್ ಶಾಕ್: ಆರ್. ಶಂಕರ್, ಎಂಟಿಬಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: 2021ರ ವರೆಗೆ ಎಚ್. ವಿಶ್ವನಾಥ್ ಸಚಿವರಾಗುವಂತಿಲ್ಲ. ಅವರು ಅನರ್ಹಗೊಂಡು ಸೋತು ವಿಧಾನಪರಿಷತ್ ಗೆ ನಾಮನಿರ್ದೇಶನಗೊಂಡಿದ್ದಾರೆ. ಹಾಗಾಗಿ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ.

ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು ಎಂದು ತಿಳಿಸಿದೆ.
ಆರ್. ಶಂಕರ್ ಹಾಗೂ ಎಂಟಿಬಿ ನಾಗರಾಜ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರು ಸಂವಿಧಾನದಡಿ ಮರು ಆಯ್ಕೆ ಆಗಿದ್ದಾರೆ. ಹಾಗಾಗಿ ಅವರು ಅನರ್ಹರಲ್ಲ ಎಂದು ಆದೇಶ ನೀಡಿದೆ.