ಬೀದರ್: ಬಸವಕಲ್ಯಾಣ ಉಪಚುನಾವಣೆ ಹೊಸ್ತಿಲಲ್ಲೇ ಜೆಡಿಎಸ್ ಗೆ ಆಘಾತ ಉಂಟಾಗಿದೆ. ಜೆಡಿಎಸ್ ಹಿರಿಯ ಮುಖಂಡ ಪಿಜಿಆರ್ ಸಿಂಧ್ಯಾ ಜೆಡಿಎಸ್ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಇಂದು ಬಸವಕಲ್ಯಾಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರೋ ಮಾಲಾ ಅವರು ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮುನ್ನಕಾಂಗ್ರೆಸ್ ನಾಯಕರಿಂದ ಬೃಹತ್ ಸಮಾವೇಶ ನಡೆಯಿತು.
ಈ ವೇಳೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಿಂಧ್ಯಾ ಕಾಂಗ್ರೆಸ್ ಸೇರ್ಪಡೆಗೊಂಡರು.












