ಬೆಂಗಳೂರು: ರಾಜ್ಯ ಸರ್ಕಾರವು ಅಕ್ಟೋಬರ್ 8ರಂದು ಹೊರಡಿಸಿದ್ದ ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಅಕ್ಟೋಬರ್ 8ರಂದು ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ, ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಆದೇಶವನ್ನು ಕೋರ್ಟ್ ಇಂದು ರದ್ದು ಮಾಡಿದೆ. ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಹತ್ತು ದಿನಗಳ ಅವಕಾಶ ನೀಡಿದೆ. ಈ ಆದೇಶದಿಂದ ಈ ಚುನಾವಣಾ ಫಲಿತಾಂಶಗಳು ಅಮಾನತು ಸ್ಥಿತಿಯಲ್ಲಿರುತ್ತದೆ.