ಕೋಲ್ಕತ್ತಾ: ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದ್ದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ 1622 ಮತಗಳ ಅಂತರದ ಸೋಲು ಅನುಭವಿಸಿದ್ದಾರೆ.