ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಗಂಗೊಳ್ಳಿ ಠಾಣಾ ವ್ಯಾಪ್ತಿಯ ಆರಾಟೆ ಸೇತುವೆ ಮೇಲೆ ಸೋಮವಾರ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಫಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಗಂಗೊಳ್ಳಿ ಸಮೀಪದ ಬಾವಿಕಟ್ಟೆ ನಿವಾಸಿ ಗಣೇಶ್ ಎಂಬವರ ಪುತ್ರ  ವಿಖ್ಯಾತ್ (24) ಗುರುತಿಸಲಾಗಿದೆ. ನಿನ್ನೆ ತಡರಾತ್ರಿ 12.30 ಸುಮಾರಿಗೆ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು,  ಅಫಘಾತ ಸ್ಥಳದಿಂದ 2 ಕಿಲೋಮೀಟರ್ ದೂರದ ಹೆಮ್ಮಾಡಿ ತನಕ ಬೈಕ್ ಎಳೆದೊಯ್ದಿದೆ. ಅಪಘಾತದ ರಭಸಕ್ಕೆ ಯುವಕನ ಮೃತ ದೇಹ ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತ ಯುವಕ ಕುಂದಾಪುರದ ಹೊಟೇಲವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗಂಗೊಳ್ಳಿ 24×7 ಹೆಲ್ಪ್ ಲೈನ್ ಸ್ವಯಂಸೇವಕರು ಹಾಗೂ ಪೊಲೀಸ್ ಸಿಬ್ಬಂದಿ  ಸಹಾಯದಿಂದ ಛಿದ್ರಗೊಂಡಿದ್ದ ಮೃತದೇಹ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.