ಮೋದಿ ಮತ್ತೊಮ್ಮೆ ಅಭಿಯಾನ: ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೈಕ್ ರ‍್ಯಾಲಿ

ಉಡುಪಿ: ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ “ಮೋದಿ ಮತ್ತೊಮ್ಮೆ 2024” ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಮಹಿಳೆಯರ ಬೈಕ್ ರ‍್ಯಾಲಿ (Women’s Bike Rally)ಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಹಾಗೂ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಹಾಗೂ ಮಹಿಳಾ ಮೋರ್ಚಾದ ಕಾರ್ಯಕರ್ತರು ಉಪಸ್ಥಿತರಿದ್ದರು.