ಕಾರ್ಕಳ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ರೆಂಜಾಳದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಕಾರ್ಕಳ ರೆಂಜಾಳ ನಿವಾಸಿ 63 ವರ್ಷದ ಅಜಿತ್ ಕುಮಾರ್ ಮೃತ ಬೈಕ್ ಸವಾರ. ಇವರು ಮೇ 2ರಂದು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಕಸಬಾ ಗ್ರಾಮದ ಗ್ಯಾಸ್ ಗೋಡೌನ್ ಬಳಿ ನಾಯಿಯೊಂದು ಅಡ್ಡ ಬಂದ ಪರಿಣಾಮ ಒಮ್ಮೇಲೆ ಬ್ರೇಕ್ ಹಾಕಿದ್ದರು. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಅಜಿತ್ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕಾರ್ಕಳದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಅಜಿತ್ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
								 
															





 
															 
															 
															











