ಕೊಲ್ಲೂರು: ಜನವರಿ 6 ರಿಂದ 8 ರ ಕರ್ನಾಟಕ ಹಕ್ಕಿ ಹಬ್ಬ

ಕೊಲ್ಲೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವು ಜನವರಿ 6 ರಿಂದ 8 ರ ವರೆಗೆ ಕೊಲ್ಲೂರಿನ ಹಲ್ಕಲ್‌ನಲ್ಲಿ ನಡೆಯಲಿದೆ.

ಜ. 6 ರಂದು ಬೆಳಗ್ಗೆ 11 ಗಂಟೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕೆ. ರಘುಪತಿ ಭಟ್ ಮತ್ತು ಲಾಲಾಜಿ ಆರ್ ಮೆಂಡನ್, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ತಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ
ವನಜಾಕ್ಷಿ ಎಸ್ ಶೆಟ್ಟಿ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಎಂ. ಮದನ್ ಗೋಪಾಲ್, ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ರಾಜ್ ಕಿಶೋರ್ ಸಿಂಗ್ (ಅರಣ್ಯ ಪಡೆ ಮುಖ್ಯಸ್ಥರು), ರಾಜೀವ್ ರಂಜನ್ (ವನ್ಯಜೀವಿ) ಮತ್ತು ವಿಜಯ್ ಶರ್ಮಾ (ಅರಣ್ಯ ಸಂರಕ್ಷಣೆ), ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸಂಜಯ್ ಬಿಜ್ಜೂರ್ (ಅರಣ್ಯ) ಮತ್ತು ವಿಜಯ್
ಮೋಹನ್ ರಾಜ್ ವಿ (ಪರಿಸರ), ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಾಲ್ಖಡೆ, ಸೀಮಾ ಗರ್ಗ್ ಹಾಗೂ ಸ್ಮಿತಾ ಬಿಜ್ಜುರ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹಾಗೂ ಮತ್ತಿತರರು ಭಾಗವಹಿಸಲಿರುವರು.