ನವದೆಹಲಿ: ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ರಾಜಸ್ಥಾನಗಳ 2023 ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿದ್ದು. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆಯಿದ್ದು ತೆಲಂಗಾಣದಲ್ಲಿ ಕಾಂಗ್ರೆಸ್ ಗದ್ದುಗೆಗೆ ಏರುವ ಸಂಭಾವ್ಯತೆಗಳು ನಿಚ್ಚಳವಾಗುತ್ತಿವೆ.
ನವೆಂಬರ್ 7 ರಂದು ಮತದಾನ ನಡೆದ ಮಿಜೋರಾಂನ ಮತಗಳ ಎಣಿಕೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗವು ಮುಂದೂಡಿದೆ.
ಛತ್ತೀಸ್‌ಗಢದಲ್ಲಿ ಬಿಜೆಪಿ ಅರ್ಧ ಶತಕದ ಗಡಿ ದಾಟಿದೆ. ಅಧಿಕೃತ ECI ಟ್ರೆಂಡ್‌ಗಳಂತೆ 53 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದು, ಕಾಂಗ್ರೆಸ್ – 34 ರಲ್ಲಿ ಮುನ್ನಡೆದಿದೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದತ್ತ ಸಾಗಿದ್ದು ECI ಪ್ರಕಾರ ಅಧಿಕೃತ ಟ್ರೆಂಡ್‌ಗಳಲ್ಲಿ 62 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿ.ಆರ್.ಎಸ್ 43 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮಧ್ಯಪ್ರದೇಶದಲ್ಲಿ ಬಿಜೆಪಿ 162 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ -65 ಸ್ಥಾನಗಳಲ್ಲಿ ಮುನ್ನಡೆಯುತ್ತಿದೆ.
ರಾಜಸ್ಥಾನದಲ್ಲಿ ಬಿಜೆಪಿ 111 ಸ್ಥಾನಗಳಲ್ಲಿ ಮುಂದಿದ್ದರೆ, ಕಾಂಗ್ರೆಸ್ 73 ಸ್ಥಾನಗಳಲ್ಲಿ ಮುನ್ನಡೆಯುತ್ತಿದೆ.