ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಟಪಾಡಿ ಮೂಡುಬೆಟ್ಟು ಗ್ರಾಮದಲ್ಲಿ ಮತಯಾಚನೆ 

ಕಾಪು: ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು.

ಈ ಸಂದರ್ಭ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಹೆಚ್ಚಿನ ಬೆಂಬಲ ನೀಡಿ ಅವರ ಗೆಲುವಲ್ಲಿ ನೀವು ಪಾಲುದಾರರಾಗಬೇಕು ಎಂದು ಮನವಿ ಮಾತನಾಡಿದರು. ನಂತರ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಸುಲೋಚನಾ ಭಟ್ ರವರು, ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ನೆರೆದಿರುವ ಜನರ ಸಂಖ್ಯೆಗೆ ಹಾಗೂ ಜನರು ನೀಡಿರುವ ಬೆಂಬಲಕ್ಕೆ ಶ್ಲಾಘನೆ ವ್ಯಕ್ತ ಪಡಿಸಿದರು. ನಂತರ ಮಾತನಾಡಿದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ನರೇಂದ್ರ ಮೋದಿಯವರ ಸಂಕಲ್ಪ ಗೆಲ್ಲಬೇಕು ನಮ್ಮ ಧರ್ಮ ಗೆಲ್ಲಬೇಕು ಅವರು ಈ ದೇಶಕ್ಕೆ ನೀಡಿರುವ ಕೊಡುಗೆಗಳು ಅಪಾರ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಆಗಲಿವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಗೀತಾಂಜಲಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯೆ ವೀಣಾ ಶೆಟ್ಟಿ, ಶಕ್ತಿ ಕೇಂದ್ರ ಪ್ರಮುಖ್ ಸಂತೋಷ್ ಮೂಡುಬೆಳ್ಳೆ, ಶಕ್ತಿ ಕೇಂದ್ರ ಅಧ್ಯಕ್ಷ ನಿತೇಶ್ ಶೇರಿಗಾರ್, ಅಭ್ಯರ್ಥಿ ಪ್ರಮುಖ್ ಅನಿಲ್ ಕುಮಾರ್, ಕಟಪಾಡಿ ಗ್ರಾಮದ ಬಿಜೆಪಿ ಸದಸ್ಯೆ ಶಾಲಿನಿಚಂದ್ರ ಪೂಜಾರಿ, ಸರ್ಕಾರಿ ಗುಡ್ಡೆ ಭೂತ್ ಅಧ್ಯಕ್ಷ ನಿತೇಶ್ ದೇವಾಡಿಗ, ಸರ್ಕಾರಿ ಗುಡ್ಡೆ ಓ ಬಿ ಸಿ ಕಾರ್ಯದರ್ಶಿ ರಘುಪತಿ ಆಚಾರ್ಯ, ಪಂಚಾಯತ್ ಸದಸ್ಯೆ ಕುಮಾರಿ ದೀಕ್ಷಿತಾ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.