ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ ಅಭ್ಯರ್ಥಿ ಬ್ರಿಜೇಶ್ ಚೌಟ, ರಾಜ್ಯ ಚುನಾವಣಾ ಸಂಚಾಲಕ ಸುನೀಲ್ ಕುಮಾರ್, ಆರಗ ಜ್ಞಾನೇಂದ್ರ, ಶಾಸಕ ಯಶ್ ಪಾಲ್ ಸುವರ್ಣ,  ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಿಟಿ ರವಿ, ಜಾತ್ಯಾತೀತ ಜನತಾದಳದ ಮುಖಂಡ, ಶಾಸಕ ಭೋಜೇಗೌಡ ಉಪಸ್ಥಿತರಿದ್ದರು.