ಉಡುಪಿ: ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯು ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ಉಸ್ತುವಾರಿ ಅಶೋಕ ಮೂರ್ತಿ ಮಾತನಾಡಿ ಸಂಘಟನಾತ್ಮಕ ವಿಚಾರಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಕಾರ್ಯಕಾರಿಣಿ ಸಭೆಯಲ್ಲಿ ಒಬಿಸಿ ಮೋರ್ಚಾದ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ಎಲ್ಲಾ ಮಂಡಲಗಳ ಒಬಿಸಿ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಕೇಶ್ ಜೋಗಿ ವಂದಿಸಿದರು.