ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತಿಗೊಂಡ ಬಳಿಕ ಗಣರಾಜ್ಯೋತ್ಸವ ಆಚರಣೆ ಪ್ರಯುಕ್ತ ಉಡುಪಿಗೆ ಆಗಮಿಸಿದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಅವರನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಉಡುಪಿ ಪ್ರವಾಸಿ ಮಂದಿರದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಉಪಸ್ಥಿತರಿದ್ದರು.