ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಅಂಗವಾಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ನೇತೃತ್ವದಲ್ಲಿ ಉಡುಪಿ ಒಳಕಾಡು ವಾರ್ಡಿನ ಬೀಡಿನಗುಡ್ಡೆಯ ಪರಿಸರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಚಾಪೆ ಮತ್ತು ಕುರ್ಚಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಕಾರ್ಯದರ್ಶಿಗಳಾದ ಪೂರ್ಣಿಮಾ ಶೆಟ್ಟಿ, ಅಶ್ವಿನಿ ಶೆಟ್ಟಿ, ಕೋಶಾಧಿಕಾರಿ ಮಾಯಾ ಕಾಮತ್, ಉಡುಪಿ ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆ ಸರೋಜಾ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಸುಜಲ ಸತೀಶ್ ಹಾಗೂ ಪ್ರತಿಮಾ ನಾಯಕ್, ರಶ್ಮಿ ಶೆಣೈ, ಪ್ರೀತಿ, ಸವಿತಾ ಶೇಟ್, ಸುಮಾ ಶೆಟ್ಟಿ, ಬೀಡಿನಗುಡ್ಡೆ ಸ್ನೇಹ ಪ್ರೀತಿ ಮಹಿಳಾ ಸಂಘದ ಅಧ್ಯಕ್ಷೆ ರೇವತಿ ರಮೇಶ್, ವಿಜೇತ, ಜ್ಯೋತಿ ಶೇಟ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.