ಮತಾಂತರ ನಿಷೇಧ ಕಾಯ್ದೆ ವಾಪಸ್ ವಿರುದ್ದ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ; ಜಿಲ್ಲಾ ಬಿಜೆಪಿಯಿಂದ ಬೆಂಬಲ: ಕುಯಿಲಾಡಿ

ಉಡುಪಿ: ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜೂ.19 ಸೋಮವಾರ ಸಂಜೆ 4.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ, ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆಗೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.