ಕಾಪು: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ರೈತ ಮೋರ್ಚಾ ವತಿಯಿಂದ ಸೋಮವಾರದಂದು ಕಾಪು ಮಂಡಲ ಬಿಜೆಪಿ ಕಚೇರಿಯ ಬಳಿ “ಬೃಹತ್ ಪ್ರತಿಭಟನೆ” ನಡೆಯಿತು.
ಪ್ರತಿಭಟನೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಧಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ದೇವಿ ತೀರ್ಥರಾಮ್, ಉಡುಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಉಪಾಧ್ಯಕ್ಷ ಸುರೇಂದ್ರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಧೀರಜ್, ಗೋಪಾಲ್ ಕಾಂಚನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಗುರುನಂದನ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕೇಶವ ಕೋಟ್ಯಾನ್, ರಾಜ್ಯ ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿ ರಾಘವೇಂದ್ರ ಉಪ್ಪೂರು, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿ ಗೋಪಾಲ ಕೃಷ್ಣ ರಾವ್ ಮೊದಲಾದವರು ಉಪಸ್ಥಿತರಿದ್ದರು.