ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ
ಉಸ್ತುವಾರಿಯಾದ ಅರುಣ್ ಸಿಂಗ್ ಅವರು ಜೂ.16ರಂದು ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದು, ಅವರ
ಪ್ರವಾಸ ವಿವರ ಹೀಗಿದೆ.
ಅಂದು ಮಧ್ಯಾಹ್ನ 3.30ಕ್ಕೆ ಅವರು ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.20ಕ್ಕೆ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳುವ ಅವರು, ಬಳಿಕ 4.45ಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ತೆರಳುವರು.
ಅಲ್ಲಿ 5 ಗಂಟೆಗೆ ರಾಜ್ಯದ ಸಚಿವರ ಜೊತೆ ಸಭೆ ನಡೆಸುವರು. ರಾತ್ರಿ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಇರಲಿದ್ದಾರೆ.