ಮಹಾರಾಷ್ಟ್ರದಲ್ಲಿ ಶೀಘ್ರವೇ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಜೆ.ಪಿ. ನಡ್ಡಾ

ಮುಂಬೈ: ಮಹಾರಾಷ್ಟ್ರದಲ್ಲಿ ಅತೀ ಶೀಘ್ರದಲ್ಲೇ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆ ನೀಡಿದ್ದು, ಇದು ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ.

ಮುಂಬೈನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 2019ರ ವಿಧಾನಸಭಾ ಚುನಾವಣೆಯಲ್ಲಿ ಜನಾದೇಶ ನಮ್ಮ ಪರವಾಗಿತ್ತು. ಆದರೆ, ನಾವು ಮೋಸಹೋದೆವು. ಶೀಘ್ರವೇ ಮಹಾರಾಷ್ಟ್ರದಲ್ಲಿ ಬಿಜೆಪಿ ಸ್ವಂತ ಬಲದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯ ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿಕೂಟದ ಸರ್ಕಾರ ಭ್ರಷ್ಟತೆಯಿಂದ ಕೂಡಿದೆ. ಇದನ್ನು ಮುಕ್ತಗೊಳಿಸುತ್ತೇವೆ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಬೇಕು ಎಂದು ಬಹಳ ಜನ ಆಸೆಪಡುತ್ತಿದ್ದಾರೆ. ಇದು ಶೀಘ್ರದಲ್ಲೇ ಈಡೇರಲಿದೆ ಎಂದರು.