ಉಡುಪಿ: ಕೇರಳ ರಾಜ್ಯದ ಬಿಜೆಪಿ ಸಹ ಉಸ್ತುವಾರಿಯಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಅವರು ನೇಮಕಗೊಂಡಿದ್ದಾರೆ.
ಸಂಘಟನೆ, ಹಿಂದುತ್ವ ಹಾಗೂ ಯುವ ನಾಯಕತ್ವದಡಿ ಕರಾವಳಿ ಭಾಗದಲ್ಲಿ ಬಿಜೆಪಿಯನ್ನು ಕಟ್ಟಿಬೆಳೆಸಿದ್ದಾರೆ. ಈ ಭಾಗದಲ್ಲಿ ಬಿಜೆಪಿ ಯುವ ಸಂಘಟನೆಯನ್ನು ದೃಢಸಂಕಲ್ಪದೊಂದಿಗೆ ಮುನ್ನಡೆಸಿಕೊಂಡು ಬಂದಿರುವುದಲ್ಲದೆ, ಯುವಜನರಿಗೆ ಶಕ್ತಿ ತುಂಬುವ ಕೆಲಸವನ್ನು ಸುನಿಲ್ ಕುಮಾರ್ ಮಾಡಿದ್ದಾರೆ.
ಇದೇ ರೀತಿಯಲ್ಲಿ ಕೇರಳ ರಾಜ್ಯಾದ್ಯಂತ ಬಿಜೆಪಿ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಸಂಘಟಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ.












