udupixpress
Home Trending ತೆಂಕನಿಡಿಯೂರು ಗ್ರಾಪಂ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಸುರೇಶ್ ನಾಯಕ್ ಕಾಂಗ್ರೆಸ್ ಸೇರ್ಪಡೆ

ತೆಂಕನಿಡಿಯೂರು ಗ್ರಾಪಂ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಸುರೇಶ್ ನಾಯಕ್ ಕಾಂಗ್ರೆಸ್ ಸೇರ್ಪಡೆ

ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಸುರೇಶ್ ನಾಯಕ್ ಅವರು ಕಾಂಗ್ರೆಸ್ ಸೇರ್ಪಡೆಗೊಂಡರು.

ಇಂದು ತೆಂಕನಿಡಿಯೂರಿನ ರಾಧ್ಮಾ ರೆಸಿಡೆನ್ಸಿಯಲ್ಲಿ ನಡೆದ ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಂಡರು.

ಇದೇ ವೇಳೆ ಅವರ ಜತೆಗೆ ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಜನಾರ್ದನ ತೋನ್ಸೆ, ರಮೇಶ ಕಾಂಚನ್, ಸತೀಶ ಅಮೀನ್ ಪಡುಕೆರೆ, ಕೃಷ್ಣಮೂರ್ತಿ ಆಚಾರ್ಯ, ಜನಾರ್ದನ ಭಂಡಾರ್ಕರ್, ಯತೀಶ್ ಕರ್ಕೆರ ಮೊದಲಾದವರು ಉಪಸ್ಥಿತರಿದ್ದರು.