ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣರಿಗೆ ಮಾತೃ ವಿಯೋಗ: ಜಿಲ್ಲಾ ಬಿಜೆಪಿ ಸಂತಾಪ.

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣ ಅವರ ತಾಯಿ ಪುಷ್ಪಾವತಿ ಆನಂದ ಪುತ್ರನ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಜನಾನುರಾಗಿಯಾಗಿದ್ದ ಪುಷ್ಪಾವತಿ ಆನಂದ ಪುತ್ರನ್ ಅವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಯಶ್ಪಾಲ್ ಸುವರ್ಣ ಹಾಗೂ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.