ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ: ಬಿಜೆಪಿ ನಾಯಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು

ಉಡುಪಿ: ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.

ದುಡಿಯುವ ಕೈಗಳಿಗೆ ಹಣ ಸಿಗಲಿ ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆ ಆರಂಭಿಸಿದರು. ಆದರೆ, ಕಳೆದ ಐದು ತಿಂಗಳಿಂದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಸಂಬಳ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ನಡೆಯುತ್ತಿದ್ದು, ಒಂದು ತಿಂಗಳು ಹಣ ಬರುವುದು ತಡವಾದರೂ ಲಕ್ಷ್ಮೀ ಅಕ್ಕ ಗೃಹಲಕ್ಷ್ಮಿ ದುಡ್ ಎಲ್ಲಿ ಅಕ್ಕ ಅಂತಾರೆ, ಕೇಂದ್ರದ ನಾಯಕರೊಂದಿಗೆ ಮಾತನಾಡಿ ಬಿಜೆಪಿ ನಾಯಕರು ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಿಸಲಿ ಎಂದರು.