ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರವನ್ನು ಸತತವಾಗಿ ಟೀಕೆ ಮಾಡುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದ ಯತ್ನಾಳ್ ಪದೇ ಪದೇ ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಲಾಗುತ್ತದೆ, ಉತ್ತರ ಕರ್ನಾಟಕದವರು ಮುಂದಿನ ಸಿಎಂ ಆಗುತ್ತಾರೆ ಎಂಬಿತ್ಯಾದಿ ಹೇಳಿಕೆ ನೀಡಿ ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಕಡೆಗೂ ಮೌನ ಮುರಿದು ನೋಟಿಸ್ ಜಾರಿ ಮಾಡಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೆ ಯತ್ನಾಳ್ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬುವುದು ಬಹಳಷ್ಟು ಕುತೂಹಲ ಮೂಡಿಸಿದೆ.