Homeರಾಜ್ಯ ಸುದ್ದಿಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜೆ. ಪಿ. ನಡ್ಡಾಗೆ ಸನ್ಮಾನ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜೆ. ಪಿ. ನಡ್ಡಾಗೆ ಸನ್ಮಾನ

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆ. ಪಿ. ನಡ್ಡಾರಿಗೆ ಬೆಳ್ಳಿಯ ದೋಣಿಯ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ಕೈಗೊಂಡ ಯೋಜನೆ ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅವಕಾಶ ಕಲ್ಪಿಸಿದ ಪಕ್ಷದ ನಿಲುವುಗಳನ್ನು ಸ್ವಾಗತಿಸಿ ರಾಷ್ಟ್ರೀಯ ಅಧ್ಯಕ್ಷರಿಗೆ ಸನ್ಮಾನಿಸಿರುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಸಿ ಟಿ ರವಿ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

error: Content is protected !!