ಭಾರತೀಯ ಜನತಾ ಪಕ್ಷದ ಚುನಾವಣಾ ಪೂರ್ವಭಾವಿ ಸಭೆ

ಉಡುಪಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯು ಹಾಲಿ ಶಾಸಕ ಕೆ.ರಘುಪತಿ ಭಟ್ ಅವರ ಮಾರ್ಗದರ್ಶನದಲ್ಲಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ನಾಯ್ಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಕುತ್ಯಾರು ನವೀನ್ ಶೆಟ್ಟಿ, ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಚುನಾವಣಾ ಕ್ಷೇತ್ರ ಪ್ರಭಾರಿ ಗಣೇಶ್ ಹೊಸಬೆಟ್ಟು, ಚುನಾವಣಾ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಮತ್ತು ದಿನೇಶ್ ಅಮೀನ್, ಗ್ರಾಮಾಂತರ ಬಿ.ಜೆ.ಪಿ ಪ್ರಧಾನ ಕಾರ್ಯದಶಿ ಸಚಿನ್ ಪೂಜಾರಿ ಮತ್ತು ಗಣೇಶ್ ಕುಲಾಲ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.