ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಎರಡನೇ ಅವಧಿಯ ಪ್ರಥಮ ವರ್ಷದ ಸಾಧನೆಗಳು ಮತ್ತು ಆತ್ಮ ನಿರ್ಭರ ಭಾರತ ಪರಿಕಲ್ಪನೆಯೊಂದಿಗೆ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಕರ್ನಾಟಕ ವತಿಯಿಂದ ತಂತ್ರಜ್ಞಾನ ಆಧಾರಿತ ಬೃಹತ್ ಕರ್ನಾಟಕ ಜನಸಂವಾದ ರ್ಯಾಲಿಯು ಜೂನ್ 14 ರವಿವಾರ ಸಂಜೆ 6 ಗಂಟೆಗೆ ರಾಜ್ಯದಲ್ಲಿ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತಿಯಲ್ಲಿ ನಡೆಯುವ ಈ ಬೃಹತ್ ಕರ್ನಾಟಕ ಜನಸಂವಾದ ರ್ಯಾಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ದೃಶ್ಯ ಮಾಧ್ಯಮಗಳ ಸಹಿತ ಬಿಜೆಪಿ ಕರ್ನಾಟಕ ಫೇಸ್ಬುಕ್ ಪೇಜ್ ಮತ್ತು ಯುಟ್ಯೂಬ್ನಲ್ಲಿ ರ್ಯಾಲಿಯು ನೇರಪ್ರಸಾರಗೊಳ್ಳಲಿದೆ. ಜನತೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ತಸಾದ್ ಶೆಟ್ಟಿ ಕಟಪಾಡಿ ಮತ್ತು ಸಹವಕ್ತಾರ ಶಿವಕುಮಾರ್ ಅಂಬಲಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.