ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾದ ದ್ವಿತೀಯ ಕಾರ್ಯಕಾರಿಣಿ ಸಭೆ

ಕಾರ್ಕಳ: ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾದ ದ್ವಿತೀಯ ಕಾರ್ಯಕಾರಿಣಿ ಸಭೆಯು ಭಾನುವಾರ ಕಾರ್ಕಳ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಉಡುಪಿ ಜಿಲ್ಲಾ ಅಧ್ಯಕ್ಷೆ ವೀಣಾ ಶೆಟ್ಟಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ನಲ್ಲೂರು ಪ್ರದೇಶದಲ್ಲಿ ಸುಮಾರು 55 ವರ್ಷಗಳಿಂದ ಬುಟ್ಟಿ, ಚಾಪೆ, ಹಗ್ಗ ಹೆಣೆಯುವ ಕಸುಬು ಮಾಡಿಕೊಂಡು ಜೀವನ ನಡೆಸುತ್ತಿರುವ 70 ವರ್ಷ ಪ್ರಾಯದ ತೋಮು ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿಗಳಾದ ರವೀಂದ್ರ ಕುಮಾರ್, ರೇಷ್ಮಾ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಜಯರಾಂ ಸಾಲ್ಯಾನ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಮೀಳಾ ಹರೀಶ್ ಮತ್ತು ರಶ್ಮಿತಾ ಶೆಟ್ಟಿ, ಉಡುಪಿ ನಗರ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಲೈಲಾ, ಮುಡಾರು ಶಕ್ತಿ ಕೇಂದ್ರ ಅಧ್ಯಕ್ಷೆ ಅಮ್ರತಾ ಪ್ರಭು, ಮುಂಡ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷೆ ಮಂಜುಳಾ ಶೆಟ್ಟಿ, ಕಾರ್ಕಳ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮರವಿಕಾಂತ್, ತಾಲೂಕು ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜ್ಯೋತಿ ರಮೇಶ್ ಉಪಸ್ಥಿತರಿದ್ದರು.

ತಾಲೂಕು ಮಹಿಳಾ ಮೋರ್ಚಾ ಕಾರ್ಯದರ್ಶಿ ಕವಿತಾ ಹರೀಶ್ ಅವರು ಸ್ವಾಗತಿಸಿದರು. ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್ ಮತ್ತು ಕೋಶಾಧಿಕಾರಿ ಸುರೇಖಾ ಶೆಟ್ಟಿ ಗಣ್ಯರನ್ನು ಗೌರವಿಸಿದರು. ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಜೆ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾ ರಾವ್ ತಾಲೂಕು ಮಹಿಳಾ ಮೋರ್ಚಾದ ವರದಿ ಮಂಡಿಸಿದರು.

ಕುಕ್ಕುಂದೂರು ಶಕ್ತಿ ಕೇಂದ್ರದ ಅಧ್ಯಕ್ಷೆ ದೀಕ್ಷಿತಾ ಶೆಟ್ಟಿ ವಂದಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ವಿನಯ ಡಿ. ಬಂಗೇರ ಕಾರ್ಯಕ್ರಮ ನಿರೂಪಿಸಿದರು.