ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಶರಣು ಸಲಗರ ಅವರು 70,556 ಮತಗಳನ್ನು ಪಡೆದು 20,904 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಮಾಲಾ ಬಿ. ನಾರಾಯಣ್ 50108 ಮತಗಳನ್ನು ಪಡೆದು ಪರಾಭವಗೊಂಡರು. ಜೆಡಿಎಸ್ ಅಭ್ಯರ್ಥಿ ಸೈಯದ್ ಖಾದ್ರಿ 11390 ಮತಗಳನ್ನು ಪಡೆದರು.