ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದಿಂದ ಶ್ರೀಕೃಷ್ಣ ಬಾಲನಿಕೇತನ ಅನಾಥಶ್ರಮಕ್ಕೆ ಆಹಾರ ಕಿಟ್ ವಿತರಣೆ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಜಿಲ್ಲೆಯ ಆರು ಮಂಡಲಗಳ ಹಿಂದುಳಿದ ವರ್ಗಗಳ ಮೋರ್ಚಾಗಳ ಸಹಯೋಗದೊಂದಿಗೆ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಅವರ ನಿರ್ದೇಶನದಂತೆ ಶುಕ್ರವಾರ ಉಡುಪಿ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ನೀಡುವ ಮೂಲಕ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ‘ಸುಶಾಸನ ದಿನ’ವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾ ಜಿಲ್ಲಾ ಅಧ್ಯಕ್ಷ ಸುರೇಂದ್ರ ಪಣಿಯೂರು, ರಾಜ್ಯ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕ ಡಾ. ಅಣ್ಣಯ್ಯ ಕುಲಾಲ್, ಜಿಲ್ಲಾ ಉಪಾಧ್ಯಕ್ಷರಾದ ಸುಧೀರ್ ಕೆ.ಎಸ್ ಮತ್ತು ಗಣೇಶ್ ಕುಮಾರ ಉದ್ಯಾವರ, ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ, ಕಾರ್ಯದರ್ಶಿ ರಾಕೇಶ್ ಜೋಗಿ , ಕೋಶಾಧಿಕಾರಿ ಸತೀಶ್ ಪೂಜಾರಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಶ್ರೀಧರ ಅಮೀನ್, ಉಡುಪಿ ಮಂಡಲ ಹಿಂದುಳಿದ ವರ್ಗದ ಮೋರ್ಚಾದ ಉಪಾಧ್ಯಕ್ಷ ಸುರೇಶ ಶೇರಿಗಾರ್, ಪ್ರಧಾನ ಕಾರ್ಯದರ್ಶಿ ಪ್ರಸಾದ ದೇವಾಡಿಗ, ಕೋಶಾಧಿಕಾರಿ ನಾಗರಾಜ ಕರ್ಕೇರ ಉಪಸ್ಥಿತರಿದ್ದರು.