ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತರ ಸಭೆಯು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ ವೀಣಾ ಎಸ್. ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಕಚೇರಿಯಲ್ಲಿ ಇಂದು ನಡೆಯಿತು.
ರಾಜ್ಯ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸದಸ್ಯರಾದ ಭಾಗೀರತಿ ಮುರುಳಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ವೇಳೆ ದೀಪಾವಳಿ ಸಂಭ್ರಮಾಚರಣೆ ಮತ್ತು ಗೋಪೂಜೆ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ನಲಿನಿ ಪ್ರದೀಪ್, ಮಾಲತಿ ನಾಯಕ್, ಹಿಂದುಳಿದ ಮೋರ್ಚಾದ ಉಪಾಧ್ಯಕ್ಷರಾದ ಲೀಲಾ ಅಮೀನ್, ಮಹಿಳಾ ಮೋರ್ಚಾದ ಉಪಾಧ್ಯಕ್ಷರು,ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕಾರಿ ಸದಸ್ಯರು, ಮಂಡಲದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ನಗರ ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಶ್ವಿನಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕಾರಣಿ ಸದಸ್ಯೆ ಶೋಭಾ ವಂದಿಸಿದರು.