ಇಸ್ರೇಲ್ ನಲ್ಲಿರುವ ಕುಟುಂಬ ಸದಸ್ಯರ ಮಾಹಿತಿಗಾಗಿ ಸಹಾಯವಾಣಿ ಸಂಪರ್ಕಿಸಿ: ಯಶ್ ಪಾಲ್ ಸುವರ್ಣ

ಉಡುಪಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಉಡುಪಿ ಜಿಲ್ಲೆಯವರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ಕುಟುಂಬಿಕರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆಮಾಡಿ ಅಥವಾ ವಾಟ್ಸ್ಯಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ ಅಗತ್ಯ ನೆರವು ಪಡೆಯಬಹುದು ಎಂದು ಯಶಪಾಲ್ ಸುವರ್ಣ ತಿಳಿಸಿದ್ದಾರೆ.

ಮೊಬೈಲ್ – +919964023344, +919110882491
ವಾಟ್ಸ್ಯಾಪ್ – +919740217378
ಇಮೈಲ್ ಐಡಿ: mla.yashpalsuvarna@gmail.com