ಉಡುಪಿ : ಜಿಲ್ಲಾ ಆಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ಜಯಲಕ್ಷ್ಮೀ ಸಿಲ್ಕ್ಸ್, ಜಯಲಕ್ಷ್ಮೀ ಆರ್ಕೇಡ್ ಉದ್ಯಾವರ, ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರ, ಜ್ಞಾನ ಸಾದನಾ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವು ಜೂನ್ 14 ರಂದು ಬೆಳಗ್ಗೆ 10 ಗಂಟೆಗೆ ಉದ್ಯಾವರ ಜ್ಞಾನ ಸಾದನಾ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉದ್ಘಾಟಿಸಲಿದ್ದು, ಉದ್ಯಾವರ ಜ್ಞಾನ ಸಾದನಾ ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ಜೋನ್ ಎಂ. ಡಿ ಸೋಜಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.