ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಇವರು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
100 ಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ರಕ್ತದಾನ ಮಾಡಿದರು.
ದೀಕ್ಷಾ ಎಚ್ ಡಿ ಎಫ್ ಸಿ ಬ್ಯಾಂಕ್ ಮ್ಯಾನೇಜರ್ , ಸೀತಾರಾಮ್ , ಗಣೇಶ್ ಆಚಾರ್, ವೀರೇಂದ್ರ ಕಾಲೇಜಿನ ನಿರ್ದೇಶಕಿಮಮತಾ, ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್, ಕಾಲೇಜು ರೆಡ್ ಕ್ರಾಸ್ ಘಟಕದ ಸಂಚಾಲಕಿ ಉಪನ್ಯಾಸಕಿ ಶೈಲಾ ಉಪನ್ಯಾಸಕರು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.