ತ್ರಿಶಾ ವಿದ್ಯಾ ಕಾಲೇಜಿನ ವತಿಯಿಂದ ರಕ್ತದಾನ ಶಿಬಿರ

ಉಡುಪಿ: ತ್ರಿಶಾ ವಿದ್ಯಾ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ ಇದರ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಾಲೇಜಿನ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ರಕ್ತದಾನ ಎನ್ನುವುದು ಜೀವ ಉಳಿಸುವ ಪ್ರಕ್ರಿಯೆಯಾಗಿದ್ದು, ಇಂತಹ ಶಿಬಿರಗಳು ಜನರಲ್ಲಿ ಮಾನವೀಯತೆಯನ್ನು ವೃದ್ಧಿಗೊಳಿಸುತ್ತವೆ ಎಂದರು.

ಕಾರ್ಯಕ್ರಮದ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಚೇರ್ಮನ್ ಎಸ್.ಜಯಕರ ಶೆಟ್ಟಿ, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷೆ ವೀಣಾ ಜೀವನ್ ಶೆಟ್ಟಿ ಭಾಗವಹಿಸಿದ್ದರು.

ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಗುರುಪ್ರಸಾದ್ ರಾವ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಇಂದುರೀತಿ, ಕಾಲೇಜಿನ ಉಪನ್ಯಾಸಕಿ ಪ್ರೊ.ಚಂದ್ರಾವತಿ ಇ. ಹಾಗೂ ಪ್ರೊ.ಚೇತನಾ ಸುನಿಲ್ ಉಪಸ್ಥಿತರಿದ್ದರು.

 

120ಕ್ಕೂ ಅಧಿಕ ವಿದ್ಯಾರ್ಥಿಗಳು, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ರಕ್ತದಾನ ಮಾಡಿದರು.