ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಯಶಸ್ವಿ ಎರಡನೇ ಅವಧಿಯ ಸಂಭ್ರಮಾಚರಣೆಯ ಪ್ರಯುಕ್ತ ಇದೇ ಮೇ 30ರಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಶೆಟ್ಟಿ ಮತ್ತು ಪ್ರಮೀಳಾ ಹರೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.