ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ರವರ ಹುಟ್ಟುಹಬ್ಬದ ಸಲುವಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ “ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಅ.17 ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ. ಈ ಪ್ರಯುಕ್ತ ಬೆಳಿಗ್ಗೆ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಇಂದ್ರಾಳಿ ಜಯಕರ ಶೆಟ್ಟಿ, ಅಧ್ಯಕ್ಷರು ತುಳು ಕೂಟ(ರಿ) ಉಡುಪಿ ಹಾಗೂ ಜನಾರ್ದನ ತೋನ್ಸೆ, ಮಾಜಿ ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ, ಉಡುಪಿ ಇವರು ಆಗಮಿಸಲಿರುವರು ಹಾಗೂ ರಮೇಶ್ ಕಾಂಚನ್, ಅಧ್ಯಕ್ಷರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ದಿನಕರ ಹೇರೂರು ಅಧ್ಯಕ್ಷರು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಇವರು ಉಪಸ್ಥಿತರಿರಲಿದ್ದಾರೆ.
ರಕ್ತದಾನಿಗಳು ಮತ್ತು ಪ್ರಮೋದ್ ಮಧ್ವರಾಜ್ರವರ ಅಭಿಮಾನಿಗಳು ಹೆಚ್ಚನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ವಿನಂತಿಸಿ ಕೊಳ್ಳುತ್ತಿದ್ದಾರೆ.