ಕಾಪು: ಬಿಜೆಪಿ ಯುವಮೋರ್ಚಾ ಕಾಪು ಮಂಡಲ ಇದರ ವತಿಯಿಂದ ಯುವಮೋರ್ಚಾದ ಅಧ್ಯಕ್ಷ ಸಚಿನ್ ಸುವರ್ಣ ಅವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಕಾರ್ಯಕ್ರಮವು ಉಡುಪಿ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಯ ರಕ್ತನಿಧಿಯಲ್ಲಿ ನಡೆಯಿತು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ವಿಜೇತ್ ಬೆಳ್ಳರ್ಪಾಡಿ, ಮಂಡಲ ಯುವಮೋರ್ಚಾದ ಉಪಾಧ್ಯಕ್ಷ ರಾಘವೇಂದ್ರ ಮಾಂಬೆಟ್ಟು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕಿಶನ್ ಅಲೆವೂರು ಹಾಗೂ ಪ್ರವೀಣ್ ಅಡ್ವೆ, ಕೋಶಾಧಿಕಾರಿ ಸನತ್ ಮಣಿಪುರ, ಮಹೇಶ್ ಶೆಟ್ಟಿ ಪಲಿಮಾರು, ಅರುಣ್ ಆಚಾರ್ಯ ಅಲೆವೂರು, ಪ್ರಸಾದ್ ಅಲೆವೂರು ಮೊದಲಾದವರು ಉಪಸ್ಥಿತರಿದ್ದರು.
ರಕ್ತದ ಕೊರತೆ ನೀಗಿಸಲು ರಕ್ತದಾನ:
ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಬೇಕಾಗಿರುವುದರಿಂದ ಹಾಗೂ ಲಸಿಕೆ ಪಡೆದ ಬಳಿಕ 28 ದಿನಗಳ ಕಾಲ ರಕ್ತದಾನ ಮಾಡಲು ಸಾಧ್ಯವಾಗದಿರುವುದರಿಂದ ಜಿಲ್ಲೆಯಲ್ಲಿ ರಕ್ತದ ಕೊರತೆ ಉಂಟಾಗಬಾರದೆಂಬ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.