ಬಾಲಿವುಡ್ ನಟ ಫರಾಜ್ ಖಾನ್ ವಿಧಿವಶ

ಮುಂಬೈ: 90ರ ದಶಕದಲ್ಲಿ ಬಾಲಿವುಡ್ ನಲ್ಲಿ ಮಿಂಚಿದ್ದ ನಟ ಫರಾಜ್ ಖಾನ್ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದರು.

ಸರ್ಪಸುತ್ತು ಕಾಯಿಲೆಯಿಂದ ಬಳಲುತ್ತಿದ್ದ ಫರಾಜ್‌ಖಾನ್‌, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಕಾಯಿಲೆ ಹೃದಯದಿಂದ ಮೆದುಳಿನವರೆಗೆ ಪಸರಿಸಿತ್ತು. ಇದರಿಂದ ಚಿಕಿತ್ಸೆ ಫಲಕಾರಿಯಾಗದೆ ಫರಾಜ್ ಮೃತಪಟ್ಟಿದ್ದಾರೆ.

ಈ ಕುರಿತು ನಟಿ ಪೂಜಾ ಭಟ್ ಟ್ವೀಟ್ ಮಾಡಿದ್ದು, ಫರಾಜ್ ನಮ್ಮನ್ನೆಲ್ಲಾ ಅಗಲಿದ್ದಾರೆ ಎಂದು ತಿಳಿಸಿದ್ದಾರೆ.
90ರ ದಶಕದ ಮೆಹೆಂದಿ, ಫರೇಬ್‌ನಂತಹ ಹಲವು ಚಿತ್ರಗಳಲ್ಲಿ ನಾಯಕನಾಗಿ ಫರಾಜ್ ನಟಿಸಿದ್ದರು.