ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮುಂಬಯಿಯ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.
ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್, ಕೈ ಪೋ ಚೇ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದರು.
ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಚಿತ್ರ ಸುಶಾಂತ್ ಸಿಂಗ್ ದೊಡ್ಡ ಮಟ್ಟದ ಗೆಲುವು ನೀಡಿತ್ತು.