ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಂಕಿತನ ಫೋಟೋಗಳನ್ನು ಬಿಡುಗಡೆಗೊಳಿಸಿದ್ದಾರೆ.
ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದು, ವಿಮಾನ ನಿಲ್ದಾಣದ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಟೋ ರಿಕ್ಷಾದಲ್ಲಿ ಬಂದ ವ್ಯಕ್ತಿಯೋರ್ವ ವಿಮಾನ ನಿಲ್ದಾಣಕ್ಕೆ ಪ್ರವೇಶ ಮಾಡಿದ್ದು ಟಿಕೆಟ್ ಕೌಂಟರ್ ಬಳಿ ಅನುಮಾನಾಸ್ಪದ ಬ್ಯಾಗ್ ಒಂದನ್ನು ಇಟ್ಟು ಹೋಗಿರುವ ದೃಶ್ಯ ಸೆರೆಯಾಗಿದೆ.
ಹೀಗಾಗಿ ಆಟೋ ರಿಕ್ಷಾ ಹಾಗೂ ಕ್ಯಾಪ್ ಧರಿಸಿರುವ ವ್ಯಕ್ತಿಯ ಫೋಟೋಗಳನ್ನು ಬಿಡುಗಡೆಗೊಳಿಸಿದ್ದು, ಆದರೆ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇದೀಗ ಸಿಸಿ ಟಿವಿ ವಿಡಿಯೋ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಮಂಗಳೂರು ಪೊಲೀಸರು ಮುಂದಾಗಿದ್ದಾರೆ.
ಸೋಮವಾರ ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿತ್ತು.