ಉಡುಪಿ : ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮೂಳೆ ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದರ ಹೆಚ್ಚುವುದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಎಂ.ಎ ಪೈ ಆಸ್ಪತ್ರೆಯ ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ರಾಜಾರಾಂ ಪೈ, ಆಸ್ಟಿಯೊಪೊರೋಸಿಸ್ ತೊಂದರೆಯನ್ನು ಪತ್ತೆಹಚ್ಚುವಲ್ಲಿ ಬೋನ್ ಮಿನರಲ್ ಡೆನ್ಸಿಟಿ (BMD) ಪರೀಕ್ಷೆಯ ಮಹತ್ವವನ್ನು ಒತ್ತಿಹೇಳುತ್ತಾರೆ.
ದೇಹವು ಹೊಸ ಮೂಳೆಗಳನ್ನು ಸಮರ್ಪಕವಾಗಿ ರೂಪಿಸಲು ವಿಫಲವಾದಾಗ ಅಥವಾ ಅಸ್ತಿತ್ವದಲ್ಲಿರುವ ಮೂಳೆಗಳ ನಾಶ ಹೆಚ್ಚಾದಾಗ ಆಸ್ಟಿಯೊಪೊರೋಸಿಸ್ ಸಂಭವಿಸುತ್ತದೆ. ಯಾವುದೇ ನೋವು – ಗಾಯ ಇಲ್ಲದೇ ಮಾಡುವ BMD ಪರೀಕ್ಷೆಗೆ ಒಳಗಾಗುವ ಮೂಲಕ, ವ್ಯಕ್ತಿಗಳು ತಮ್ಮ ಮೂಳೆಗಳ ಸಾಂದ್ರತೆಯನ್ನು ಕಂಡು ಹಿಡಿಯಬಹುದು ಮತ್ತು ಸ್ಥಿತಿಯನ್ನು ನಿರ್ವಹಿಸುವಲ್ಲಿ ಸೂಕ್ತ ಮಾರ್ಗದರ್ಶನವನ್ನು ಪಡೆಯಬಹುದು.
ಆರಂಭಿಕ ಪತ್ತೆಯ ಮಹತ್ವವನ್ನು ತಿಳಿಸಲು ಮತ್ತು ಮೂಳೆಯ ಆರೋಗ್ಯವನ್ನು ಉತ್ತೇಜಿಸಲು, ಡಾ.ಟಿ.ಎಂ.ಎ. ಪೈ ಆಸ್ಪತ್ರೆಯು ಜುಲೈ 26 ರಂದು ಆರ್ಥೋಪೆಡಿಕ್ಸ್ ವಿಭಾಗದಲ್ಲಿ ಬೋನ್ ಮಿನರಲ್ ಡೆನ್ಸಿಟಿ ಉಚಿತ ತಪಾಸಣಾ ಶಿಬಿರವನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಆಯೋಜಿಸುತ್ತಿದೆ.
ಶಿಬಿರವು 40 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ, ವಿಶೇಷವಾಗಿ ಹೆಚ್ಚಿನ ಅಪಾಯದಲ್ಲಿರುವ ಮಹಿಳೆಯರಿಗೆ ತೆರೆದಿರುತ್ತದೆ. 100 ವ್ಯಕ್ತಿಗಳಿಗೆ ಸೀಮಿತವಾಗಿದ್ದು, ಮೊದಲು ಬಂದವರಿಗೇ ಮೊದಲ ಸೇವೆಯ ಆಧಾರದ ಮೇಲೆ ಇರುತ್ತದೆ. ನೋಂದಣಿಗಾಗಿ 0820-2526501 Extn – 2164 ಅನ್ನು ಸಂಪರ್ಕಿಸಿ.
ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ ಮತ್ತು BMD ಪರೀಕ್ಷೆಯ ಮೂಲಕ ಆಸ್ಟಿಯೊಪೊರೋಸಿಸ್ ತೊಂದರೆಯನ್ನು ಮೊದಲೇ ಪತ್ತೆಹಚ್ಚುವುದರಿಂದ ಮೂಳೆ ಮುರಿತಗಳು ಮತ್ತು ಸಂಬಂಧಿತ ತೊಡಕುಗಳ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು ಎಂದು ಡಾ. ಟಿ.ಎಂ.ಎ. ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ತಿಳಿಸಿದ್ದಾರೆ.