ಜಿಲ್ಲಾ ವಕೀಲರ ಸಂಘ: ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಉಡುಪಿ ವಕೀಲರ ಸಂಘದ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಜುಲೈ 21ರಂದು ಆಯೋಜಿಸಿದ “ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮ” ಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ್ ಶಿವಪ್ಪ ಇವರು ಚಾಲನೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ಶರ್ಮಿಳಾ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಾತ್ವಿಕ್ ಭಟ್, ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್, ಉಪಾಧ್ಯಕ್ಷ ದಿನೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯೆ ಶ್ರೀಮತಿ ಅಮೃತಕಲಾ, ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬದರಿನಾಥ್ ನಾಯರಿ ಮತ್ತಿತರರು ಉಪಸ್ಥಿತರಿದ್ದರು.