ಉಡುಪಿ: ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 18 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.
ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ ಲಸಿಕೆ, ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಬಹುದಾಗಿದೆ.
2ನೇ ಡೋಸ್ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ಪಡೆದು 26 ವಾರ (6 ತಿಂಗಳು) ಪೂರೈಸಿದವರು ಕೋವಿಡ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ನೀಡಲಾಗುವುದು.
ಕೋವಿಶೀಲ್ಡ್ ಮುನ್ನೆಚ್ಚರಿಕಾ ಡೋಸ್ ಲಸಿಕೆಯು ಮಧ್ಯಾಹ್ನ 12 ರ ನಂತರ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ. ಸಾರ್ವಜನಿಕರು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ, ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಮತ್ತು ಲಸಿಕೆಯನ್ನು ನಿಗಧಿಪಡಿಸಿಕೊಂಡು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.